ADVERTISEMENT

ಮುಡಾ, ವಾಲ್ಮೀಕಿ ನಿಗಮ ಹಗರಣಗಳ ತನಿಖೆ ಸಿಬಿಐಗೆ ನೀಡಲು ಕೋರಿ ರಿಟ್‌

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2024, 16:25 IST
Last Updated 13 ಆಗಸ್ಟ್ 2024, 16:25 IST
<div class="paragraphs"><p> ಹೈಕೋರ್ಟ್‌ </p></div>

ಹೈಕೋರ್ಟ್‌

   

ಬೆಂಗಳೂರು: ‘ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಅಂದಾಜು ₹50 ಸಾವಿರ ಕೋಟಿ ಮೊತ್ತದ ಅವ್ಯವಹಾರ ಪ್ರಕರಣಗಳ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ರಿಟ್‌ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ಮೈಸೂರಿನ ಕೆ.ಆರ್‌.ನಗರದ ವಕೀಲ ಸಿ.ಸಂತೋಷ್‌ ಈ ರಿಟ್‌ ಅರ್ಜಿ ಸಲ್ಲಿಸಿದ್ದು, ಇದಿನ್ನೂ ವಿಚಾರಣೆಗೆ ನಿಗದಿಯಾಗಬೇಕಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಹೈಕೋರ್ಟ್ ವಕೀಲ ಬಿ.ಎಸ್‌.ಸಾವಂತ್‌ ವಕಾಲತ್ತು ವಹಿಸಿದ್ದಾರೆ.

ADVERTISEMENT

‘2015ರಲ್ಲಿ ನೀರಾವರಿ ಯೋಜನೆ ಅಕ್ರಮದಲ್ಲಿ ₹40 ಕೋಟಿ, 2019 ರಿಂದ 2023ರ ಅವಧಿಯಲ್ಲಿನ ಕಿಯೋನಿಕ್ಸ್‌ನಲ್ಲಿ ₹500 ಕೋಟಿ, ಕೋವಿಡ್‌ ನಿರ್ವಹಣೆಗೆ ಸರಂಜಾಮು ಖರೀದಿ ಹೆಸರಿನಲ್ಲಿ ₹40 ಸಾವಿರ ಕೋಟಿ, ಪಿಎಸ್‌ಐ ನೇಮಕಾತಿ ಹಗರಣದಲ್ಲಿ ₹100 ಕೋಟಿ, ಸರ್ಕಾರಿ ಗುತ್ತಿಗೆ ಮಂಜೂರಾತಿಯಲ್ಲಿ ಶೇ 40ರ ಕಮಿಷನ್‌ನಿಂದ ₹2 ಸಾವಿರ ಕೋಟಿ ಮೊತ್ತವೂ ಸೇರಿದಂತೆ ಹಲವು ಅಕ್ರಮಗಳು ನಡೆದಿವೆ’ ಎಂದು ಹಲವು ಹಗರಣಗಳನ್ನು ಅರ್ಜಿಯಲ್ಲಿ ಪಟ್ಟಿ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.