ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಇಂದು(ಜುಲೈ 1)ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಾಧ್ಯಮಗಳಿಗೆ ತಿಳಿಸಿದೆ. ಈ ಮಧ್ಯೆ ಆನಂದ್ ಸಿಂಗ್ ಕೇಂದ್ರ ಬಿಜೆಪಿ ನಾಯಕರನ್ನು ಭೇಟಿಯಾಗಿ ಬಂದಿದ್ದು, ಶಾಸಕ ಸ್ಥಾನಕ್ಕೆರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಇಂಥ ಸಂದರ್ಭದಲ್ಲಿ ಬಿಎಸ್‌ವೈ ಕರೆದಿರುವ ಸುದ್ದಿಗೋಷ್ಠಿಯು ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.