ADVERTISEMENT

ನಾಳೆ ರಾಜ್ಯದ 17 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 4 ಜೂನ್ 2024, 15:58 IST
Last Updated 4 ಜೂನ್ 2024, 15:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧೆಡೆ ಬುಧವಾರವೂ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಕೆಲವೆಡೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಹೇಳಿದೆ. 

ಕರಾವಳಿಯಲ್ಲಿ ಸಮುದ್ರದ ಅಲೆಗಳು ಏರಿಳಿತದಿಂದ ಕೂಡಿರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮೀನುಗಾರರು ಎಚ್ಚರಿಕೆ ವಹಿಸಬೇಕು. ಮುಂದಿನ ಎರಡು ದಿನಗಳು ರಾಜ್ಯದಾದ್ಯಂತ ಗರಿಷ್ಠ ಹಾಗೂ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. 

ADVERTISEMENT

ಇದೇ 8ರವರೆಗೂ ರಾಜ್ಯದ ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.