ADVERTISEMENT

ಇಂದು ರಾಜ್ಯದ 4 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2024, 23:48 IST
Last Updated 13 ನವೆಂಬರ್ 2024, 23:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ನಾಲ್ಕು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳು ಹಾಗೂ ಕರಾವಳಿಯ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹೆಚ್ಚಿನ ಸ್ಥಳಗಳಲ್ಲಿ ಜಿಟಿಜಿಟಿ ಮಳೆ ಹಾಗೂ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜತೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗೆ ಶುಕ್ರವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.