ADVERTISEMENT

ಭಾರಿ ಮಳೆ ಸಾಧ್ಯತೆ: 11 ಜಿಲ್ಲೆಗಳಿಗೆ ನಾಳೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 22:09 IST
Last Updated 18 ಅಕ್ಟೋಬರ್ 2024, 22:09 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಹಾಗೂ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

‌ಕರಾವಳಿ ಹಾಗೂ ಒಳನಾಡಿನ ಹಲವೆಡೆ ಶನಿವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ತೀವ್ರತೆ ಭಾನುವಾರ ಹೆಚ್ಚುವ ಸಂಭವವಿದ್ದು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ.ಯಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಸೋಮವಾರವೂ ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವವಿದೆ. 13 ಜಿಲ್ಲೆಗಳಿಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ನೀಡಿದೆ. 

ಬೆಂಗಳೂರಿನಲ್ಲಿ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.