ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ಸಿ.ಪಿ. ಯೋಗೇಶ್ವರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬುಧವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಲಿದ್ದಾರೆ.
ಬುಧವಾರ ಬೆಳಿಗ್ಗೆ ಯೋಗೇಶ್ವರ್ ಅವರು ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಮನೆಗೆ ಬಂದರು. ಅಲ್ಲಿಂದ ತಮ್ಮ ಕಾರಿನಲ್ಲಿ ಯೋಗೇಶ್ವರ್ ಅವರನ್ನು ಸಿದ್ದರಾಮಯ್ಯ ಅವರ 'ಕಾವೇರಿ' ನಿವಾಸಕ್ಕೆ ಶಿವಕುಮಾರ್ ಕರೆದುಕೊಂಡು ಹೋದರು.
ಮುಖ್ಯಮಂತ್ರಿ ನಿವಾಸದಲ್ಲಿ ಸಚಿವ ಜಮೀರ್ ಅಹಮದ್ ಖಾನ್, ಮಾಜಿ ಸಂಸದ ಡಿ.ಕೆ. ಸುರೇಶ್, ಶಾಸಕ ರವಿಕುಮಾರ್ ಗಣಿಗ ಕೂಡಾ ಇದ್ದರು.
'ಕೈ' ನಾಯಕರ ಅಂಗಳದಲ್ಲಿ ಕಾಣಿಸಿಕೊಂಡ ಯೋಗೇಶ್ವರ್ ಬಿಜೆಪಿ- ಜೆಡಿಎಸ್ ನಾಯಕರಿಗೆ ದೊಡ್ಡ ಆಘಾತ ನೀಡಿದ್ದಾರೆ. ಯೋಗೇಶ್ವರ್ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳಲು ಬಿಜೆಪಿ ನಾಯಕರು ಹರಸಾಹಸ ನಡೆಸಿದ್ದರು. ಆದರೆ, ಮಂಗಳವಾರ ಇಡೀ ದಿನ ಯೋಗೇಶ್ವರ್ ಅವರು ತಮ್ಮ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.