ADVERTISEMENT

ಯುವ ಕಾಂಗ್ರೆಸ್‌ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 15:59 IST
Last Updated 26 ಜುಲೈ 2024, 15:59 IST
<div class="paragraphs"><p>ಕಾಂಗ್ರೆಸ್‌</p></div>

ಕಾಂಗ್ರೆಸ್‌

   

ಬೆಂಗಳೂರು: ಯುವ ಕಾಂಗ್ರೆಸ್‌ನಲ್ಲಿ ಹೊಸ ನಾಯಕರನ್ನು ಸೃಷ್ಟಿಸಲು ಆ.16ರಿಂದ ಸೆ.16ರವರೆಗೆ ಸದಸ್ಯತ್ವ ನೋಂದಣಿ ಹಾಗೂ ಪಕ್ಷದ ಆಂತರಿಕ ಚುನಾವಣೆ ನಡೆಸಲಾಗುತ್ತಿದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಜುಲೈ 24ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆ. 2  ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. 3ರಿಂದ 8ರವರೆಗೆ ನಾಮಪತ್ರ ಪರಿಶೀಲನೆ. 9ರಂದು ನಾಮಪತ್ರ ಅಂತಿಮಗೊಳಿಸಲಾಗುವುದು. ಆ. 16ರಿಂದ ಸೆ. 16ರವರೆ ನೋಂದಣಿ ನಡೆಯಲಿದೆ. ಸದಸ್ಯರಾಗಲು ಬಯಸುವವರು ಆನ್‌ಲೈನ್‌ ಮೂಲಕ ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು. ಅತಿ ಹೆಚ್ಚು ಮತ ಪಡೆಯುವವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ. ಮತಗಳ ಆಧಾರದ ಮೇಲೆ ನಂತರದ ಸ್ಥಾನಗಳು ಇತರರಿಗೆ ದೊರೆಯಲಿವೆ ಎಂದು ಮಾಹಿತಿ ನೀಡಿದರು.

ADVERTISEMENT

ಯುವ ಕಾಂಗ್ರೆಸ್‌ನ ಸದಸ್ಯತ್ವ ಪಡೆದ ದಿನದಿಂದಲೇ ಬ್ಲಾಕ್, ಜಿಲ್ಲಾ ಹಾಗೂ ರಾಜ್ಯ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡಲು ಮತದಾನ ಮಾಡುವ ಅಧಿಕಾರ ಸಿಗಲಿದೆ. ಒಬ್ಬರಿಗೆ ಆರು ಮತ ಹಾಕುವ ಅಧಿಕಾರವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಐವೈಸಿ ಆ್ಯಪ್‌ನಲ್ಲಿ ವೀಕ್ಷಿಸಬಹುದು ಎಂದು ಮಾಹಿತಿ ನೀಡಿದರು.

ಯುವ ಕಾಂಗ್ರೆಸ್‌ ಸದಸ್ಯತ್ವ ಪಡೆಯುವವರು 35 ವರ್ಷದ ಒಳಗಿನವರಾಗಿರಬೇಕು. ಸದಸ್ಯತ್ವ ನೋಂದಣಿ ಶುಲ್ಕ ₹50 ಕಟ್ಟಬೇಕು. ಮತದಾನ ಮಾಡುವಾಗ ಪಕ್ಷ ನೀಡಿದ ಮತದಾರರ ಗುರುತಿನ ಚೀಟಿ ಕಡ್ಡಾಯವಾಗಿರುತ್ತದೆ. ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ಹೇಳಿದರು. 

ಮಹಿಳೆಯರು, ಪರಿಶಿಷ್ಟರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರಿಗೂ ಮೀಸಲಾತಿ ಇರುತ್ತದೆ. ಬಳ್ಳಾರಿ, ಮಂಡ್ಯ, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಕೇಂದ್ರ ಸೇರಿ ಐದು ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.