ಬೆಂಗಳೂರು: ‘ರಾಜ್ಯದಲ್ಲಿ ಯಾವುದೇ ವ್ಯಕ್ತಿಯಲ್ಲಿ ಈವರೆಗೂ ಝಿಕಾ ವೈರಾಣು ಪತ್ತೆಯಾಗಿಲ್ಲ. ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಮಾತ್ರ ಝಿಕಾ ವೈರಾಣು ದೃಢಪಟ್ಟಿದ್ದು, ಆತಂಕಪಡಬೇಕಾಗಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಸಿದರು.
ಗುರುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರದಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಾಣು ಇರುವ ಬಗ್ಗೆ 10 ದಿನಗಳ ಹಿಂದೆ ಪ್ರಯೋಗಾಯಲದ ವರದಿ ಬಂದಿದೆ. ಆ ಭಾಗದಲ್ಲಿ ಜ್ವರ ಕಾಣಿಸಿಕೊಂಡು, ಆಸ್ಪತ್ರೆಗೆ ದಾಖಲಾದವರ ಮಾದರಿಯನ್ನು ಎನ್‌ಐವಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೂರು ದಿನಗಳಲ್ಲಿ ವರದಿ ಬರುವ ಸಾಧ್ಯತೆಯಿದೆ. ವೈರಾಣು ತಡೆಗೆ ಸಂಬಂಧಿಸಿದಂತೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದರು.
‘ಈ ಸೋಂಕಿಗೆ ಒಳಗಾದವರಿಗೆ ಜ್ವರ, ದದ್ದು, ಕೀಲು ನೋವು ಸೇರಿದಂತೆ ವಿವಿಧ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಗರ್ಭಿಣಿಯರು ಹಾಗೂ ಬಾಣಂತಿಯರು ಈ ಜ್ವರದ ಬಗ್ಗೆ ಎಚ್ಚರ ವಹಿಸಬೇಕು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.