ADVERTISEMENT

ಎರಡು ದಿನಗಳಲ್ಲಿ ತುಂಗಭದ್ರಾ ಜಲಾಶಯ ಭರ್ತಿ ಸಾಧ್ಯತೆ!

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 5:45 IST
Last Updated 10 ಆಗಸ್ಟ್ 2019, 5:45 IST
   

ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಮತ್ತಷ್ಟು ಹೆಚ್ಚಾಗಿದ್ದು, ಕಳೆದ ಎರಡು ದಿನಗಳಲ್ಲಿ ಅಣೆಕಟ್ಟೆಗೆ 28 ಟಿಎಂಸಿ ಅಡಿ ನೀರು ಬಂದಿದೆ.

ಇಲ್ಲಿಯವರೆಗೂ 76.70 ಟಿಎಂಸಿ ನೀರು ಸಂಗ್ರಹವಾಗಿದೆ.

ಸದ್ಯ ಜಲಾಶಯಕ್ಕೆ 1.84 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಶುಕ್ರವಾರ ಜಲಾಶಯದಲ್ಲಿ 60 ಟಿಎಂಸಿ ಅಡಿ ನೀರಿನ ಸಂಗ್ರಹವಿತ್ತು. 1.40 ಲಕ್ಷ ಕ್ಯುಸೆಕ್ ಒಳಹರಿವು ಇತ್ತು.

ADVERTISEMENT

ತುಂಗಾ ಜಲಾಶಯದಿಂದ ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹೊರಬಿಡುತ್ತಿರುವುದು, ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿರುವ ಕಾರಣ ಅಪಾರ ನೀರು ಹರಿದು ಬರುತ್ತಿದೆ.

ಇನ್ನೆರಡು ದಿನಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ಇದ್ದು, ನದಿಗೆ ನೀರು ಬಿಡಲು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ನದಿ ಪಾತ್ರದ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವ ಕಾರಣ ಹೂವಿನಹಡಗಲಿಯಲ್ಲಿ 120ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಐದು ಸಾವಿರ ಹೆಕ್ಟೇರ್ ಗೂ ಅಧಿಕ ಪ್ರದೇಶಕ್ಕೆ ನೀರು ನುಗ್ಗಿರುವುದರಿಂದ ಬೆಳೆ ಹಾನಿಯಾಗಿದೆ. ಸಂಸದ ವೈ.ದೇವೇಂದ್ರಪ್ಪ, ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಅವರು ಅಧಿಕಾರಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.