ವಾಷಿಂಗ್ಟನ್: ತೀವ್ರ ವಿರೋಧದ ನಡುವೆಯೂ ಜೆರುಸಲೇಂ ಇಸ್ರೇಲ್ ರಾಜಧಾನಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಜೆರುಸಲೇಂ ಅನ್ನು ಇಸ್ರೇಲ್‌ನ ರಾಜಧಾನಿಯನ್ನಾಗಿ ಮಾನ್ಯ ಮಾಡಿ, ಅಮೆರಿಕದ ರಾಯಭಾರ ಕಚೇರಿಯನ್ನು ಟೆಲ್‍ಅವಿವ್‍ನಿಂದ ಜೆರುಸಲೆಂಗೆ ಸ್ಥಳಾಂತರಿಸಲು ಇಸ್ರೇಲ್ ಪರ ಒಲವಿರುವ ಅಮೆರಿಕದ ರಾಜಕಾರಣಿಗಳು ಟ್ರಂಪ್ ಮೇಲೆ ತೀವ್ರ ಒತ್ತಡ ತಂದಿದ್ದರು.
ಜೆರುಸಲೇಂ ಅನ್ನು ಇಸ್ರೇಲ್ ರಾಜಧಾನಿ ಎಂದು ಮಾನ್ಯ ಮಾಡುವುದಾಗಿ ಅಧ್ಯಕ್ಷೀಯ ಚುನಾವಣೆ ವೇಳೆ ಟ್ರಂಪ್ ಭರವಸೆಯನ್ನೂ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.