ADVERTISEMENT

ಪಾಕ್‌: ಭಯೋತ್ಪಾದನಾ ನಿಧಿ ಸಂಗ್ರಹಿಸುತ್ತಿದ್ದ 6 ಜನರ ಬಂಧನ

ಪಿಟಿಐ
Published 29 ಮೇ 2019, 19:05 IST
Last Updated 29 ಮೇ 2019, 19:05 IST
   

ಲಾಹೋರ್‌ :ಭಯೋತ್ಪಾದನಾ ಚಟುವಟಿಕೆಗಳಿಗೆ ನಿಧಿ ಸಂಗ್ರಹಿಸುತ್ತಿದ್ದರು ಎಂಬ ಆರೋಪದ ಮೇಲೆ ಜೈಶ್‌–ಎ–ಮಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಆರು ಜನರನ್ನು ಪಂಜಾಬ್‌ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಜಾಗತಿಕ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ ಭಯೋತ್ಪಾದನಾ ಸಂಘಟನೆಗಳಿಗೆ ಆರ್ಥಿಕ ನೆರವು ದೊರೆಯದಂತೆ ಎಚ್ಚರವಹಿಸುತ್ತಿದೆ.

ಗುಜ್ರಾನ್ವಾಲಾ ಪ್ರದೇಶದಲ್ಲಿ ನಿಧಿ ಸಂಗ್ರಹಿಸುತ್ತಿದ್ದ ಆರು ಜನರನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ವಶಕ್ಕೆ ಪಡೆದಿರುವುದಾಗಿ ಪಂಜಾಬ್‌ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ಪಡೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.