ಲಂಡನ್: ವೀಸಾ ಪಡೆಯಲು ಅರ್ಜಿ ಸಲ್ಲಿಸುವವರಲ್ಲಿ ಭಾರತೀಯ ಟೆಕಿಗಳುಅಧಿಕ ಸಂಖ್ಯೆಯಲ್ಲಿದ್ದಾರೆ ಎಂದು ಬ್ರಿಟನ್‌ನ ‘ನೆಟ್‌ವರ್ಕ್ ಡಿಜಿಟಲ್ ಟೆಕ್’ ವಾಣಿಜ್ಯೋದ್ಯಮಿಗಳ ಸಂಸ್ಥೆ ಹೇಳಿದೆ.
ನೂತನ ದತ್ತಾಂಶವನ್ನು ಬಿಡುಗಡೆ ಮಾಡಿರುವ ಸಂಸ್ಥೆ, ಹೆಚ್ಚಿನ ಸಂಖ್ಯೆಯಲ್ಲಿ ಭಾರತ ಮತ್ತುಅಮೆರಿಕದ ಟೆಕಿಗಳು ವೀಸಾ ಕೋರಿ ಅರ್ಜಿ ಸಲ್ಲಿಸುತ್ತಿದ್ದಾರೆ.ಇವರ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 45 ಹೆಚ್ಚಾಗಿದೆ. ಮಾಹಿತಿ ತಂತ್ರಜ್ಞಾನ ಸುಧಾರಣೆ, ವಾಣಿಜ್ಯೋದ್ಯಮ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ (ಎಐ), ಹಣಕಾಸು ತಂತ್ರಜ್ಞಾನ, ಕ್ಲೌಡ್ ಕಂಪ್ಯೂಟಿಂಗ್ ಕ್ಷೇತ್ರಗಳ ಅಧ್ಯಯನಕ್ಕಾಗಿ ಇವರು ಬ್ರಿಟನ್‌ಗೆ ಭೇಟಿ ನೀಡುತ್ತಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ, ವಾಣಿಜ್ಯ ಕ್ಷೇತ್ರಗಳಲ್ಲಿ ಪ್ರತಿಭೆಗಳನ್ನು ರೂಪಿಸುವ ಹಬ್ ಆಗಿ ಬ್ರಿಟನ್ ಪಾರಮ್ಯ ಸಾಧಿಸಿದ್ದು, ವೀಸಾ ಪಡೆಯುವವರ ಸಂಖ್ಯೆಯೂ ಹೆಚ್ಚಿದೆ ಎಂದು ಸಂಸ್ಥೆ ತಿಳಿಸಿದೆ.
ಅರ್ಜಿ ಸಲ್ಲಿಸುವವರಲ್ಲಿನೈಜೀರಿಯಾ, ರಷ್ಯಾ, ಕೆನಡಾ, ಆಸ್ಟ್ರೇಲಿಯಾ, ಚೀನಾ ಮತ್ತು ದಕ್ಷಿಣ ಆಫ್ರಿಕಾದ ಟೆಕಿಗಳು ನಂತರದ ಸ್ಥಾನದಲ್ಲಿದ್ದಾರೆ. ಬ್ರಿಟನ್ ಅಕಾಡೆಮಿಕ್ ಸಂಸ್ಥೆಗಳನ್ನು ಸೃಷ್ಟಿಸಿರುವುದಷ್ಟೇ ಅಲ್ಲ. ಪ್ರತಿಭೆಗಳನ್ನು ರೂಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ಬ್ರಿಟನ್‌ನ ಡಿಜಿಟಲ್ ಮತ್ತು ಸೃಜನಶೀಲ ಉದ್ಯಮಗಳ ಸಚಿವ ಮಾರ್ಗಟ್ ಜೇಮ್ಸ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.