ಸ್ಟಾಕ್‌ಹೋಮ್: ಭೌತ ವಿಜ್ಞಾನದಲ್ಲಿ ಅಪಾರ ಸಂಶೋಧನೆ ನಡೆಸಿರುವ ವಿಜ್ಞಾನಿಗಳಾದ ರೇನರ್ ವೀಸ್, ಬ್ಯಾರಿ ಬೈಷ್, ಕಿಪ್ ತೋರ್ನ್ವ ಅವರಿಗೆ 2017ರ ಸಾಲಿನ ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.
ಗುರುತ್ವಾಕರ್ಷಣೆ ತರಂಗಗಳ ಕುರಿತು ಮಾಡಿದ್ದ ಸಂಶೋಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಗುರುತ್ವಾಕರ್ಷಣೆ ತರಂಗಗಳ ಕುರಿತಂತೆ ಅಲ್ಬರ್ಟ್ ಐನ್‌ಸ್ಟೈನ್ ಮೊದಲ ಬಾರಿಗೆ ಪರಿಕಲ್ಪನೆಯನ್ನು ನೀಡಿದ್ದರು.
ಖ್ಯಾತ ವಿಜ್ಞಾನಿ ಅಲ್ಪ್ರೆಡ್ ನೊಬಲ್ ಅವರ ನೆನಪಿಗಾಗಿ ಪ್ರತಿವರ್ಷ ವಿಜ್ಞಾನ, ಕಲೆ, ಸಾಹಿತ್ಯ, ಶಾಂತಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೋಬೆಲ್ ಪ್ರಶಸ್ತಿ ನೀಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.