ವಾಷಿಂಗ್ಟನ್ (ಪಿಟಿಐ): ಭಾರತದಲ್ಲಿನ ಅಮೆರಿಕ ರಾಯಭಾರಿಯನ್ನಾಗಿ ಭಾರತೀಯ ಮೂಲದ ರಿಚರ್ಡ್ ರಾಹುಲ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ.
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಈ ನೇಮಕ ಮಾಡಿದ್ದಾರೆ ಎಂಬುದನ್ನು ಅಮೆರಿಕ ಸಂಸತ್ ಖಚಿತ ಪಡಿಸಿದೆ.
ವರ್ಮಾ ಅವರು ಈ ಹಿಂದೆ ಅಮೆರಿಕ ಸರ್ಕಾರದಲ್ಲಿನ ವಿವಿಧ ಉನ್ನತಮಟ್ಟದ ಹುದ್ದೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಇದೇ ಮೊದಲ ಬಾರಿಗೆ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಅಮೆರಿಕದ ರಾಯಭಾರಿಯಾಗಿ ಉನ್ನತ ಹುದ್ದೆಯನ್ನು ನಿರ್ವಹಿಸಲು ಭಾರತಕ್ಕೆ ಆಗಮಿಸುತ್ತಿದ್ದಾರೆ.
45 ವರ್ಷದ ವರ್ಮಾ ಅವರು ಒಬಾಮಾ ಮತ್ತು ಹಿಲರಿ ಕ್ಲಿಂಟನ್ ಅವರಿಗೆ ಆಪ್ತರು ಎನ್ನಲಾಗಿದೆ.
ಸೆ. 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಯಲ್ಲಿ ಈ ನೇಮಕಾತಿ ಮಹತ್ವ ಪಡೆದಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.