ಬೀಜಿಂಗ್: ಕೇಂದ್ರ ಚೀನಾದ ಹೆನನ್ ಪ್ರಾಂತ್ಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅವಘಡದಲ್ಲಿ ಹತ್ತು ಮಂದಿ ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶನಿವಾರ ತಿಳಿಸಿದರು.
ಪಿಂಗ್ದಿಂಶ್ಯಾನ್ ಟಿಯನಾನ್ ಕೋಲ್ ಮೈನಿಂಗ್ ಕೊ. ಲಿಮಿಟೆಡ್‌ನ ಗಣಿಯಲ್ಲಿ ಶುಕ್ರವಾರ ರಾತ್ರಿ 2.55ರ ಸುಮಾರಿಗೆ ಕಲ್ಲಿದ್ದಲು ಮತ್ತು ಅನಿಲ ಸ್ಫೋಟಗೊಂಡು ದುರಂತ ಸಂಭವಿಸಿರುವ ಸಾಧ್ಯತೆ ಇದೆ. ಈ ವೇಳೆ 425 ಮಂದಿ ನೆಲದಡಿಯಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ 380 ಮಂದಿಯನ್ನು ಸುರಕ್ಷಿತವಾಗಿ ಹೊರಗೆ ತರಲಾಗಿದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಸರ್ಕಾರಿ ಒಡೆತನದ ಸಿಸಿಟಿವಿ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.