ADVERTISEMENT

ಅಕ್ರಮ ಮೀನುಗಾರಿಕೆ ಆರೋಪ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಅಕ್ಟೋಬರ್ 2024, 10:00 IST
Last Updated 27 ಅಕ್ಟೋಬರ್ 2024, 10:00 IST
<div class="paragraphs"><p>ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ</p></div>

ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ

   

-ಪಿಟಿಐ ಚಿತ್ರ

ಕೊಲಂಬೊ: ‘ಸಮುದ್ರದ ಗಡಿ ದಾಟಿ ಮೀನುಗಾರಿಕೆಯಲ್ಲಿ ತೊಡಗಿದ್ದ 12 ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದ್ದು, ದ್ವೀಪರಾಷ್ಟ್ರದಲ್ಲಿ ಈ ವರ್ಷ ಬಂಧನಕ್ಕೆ ಒಳಗಾದ ಭಾರತೀಯ ಮೀನುಗಾರರ ಸಂಖ್ಯೆ 462ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ಉತ್ತರ ಪ್ರಾಂತ್ಯದ ಜಾಫ್ನಾ, ಪೆಡ್ರೊ ಕರಾವಳಿಯಲ್ಲಿ ಮೀನುಗಾರರನ್ನು ಬಂಧಿಸಿದ್ದು, ಬೋಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾ ನೌಕಾಪಡೆಯು ಬಿಡುಗಡೆಗೊಳಿಸಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

‘ಶ್ರೀಲಂಕಾ ನೌಕಾಪಡೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಈ ಮೀನುಗಾರರನ್ನು ಬಂಧಿಸಲಾಗಿದ್ದು, ಕಂಕಸಂತುರೈ ಬಂದರಿಗೆ ಕರೆದೊಯ್ಯಲಾಗಿದೆ. ಮುಂದಿನ ಕ್ರಮ ತೆಗೆದುಕೊಳ್ಳಲು ಮೈಲಾಡಿ ಮೀನುಗಾರಿಕಾ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ’‌ ಎಂದು ಅವರು ಮಾಹಿತಿ ನೀಡಿದ್ದಾರೆ .

ಇದೇ ವರ್ಷ ಶ್ರೀಲಂಕಾ ನೌಕಾಪಡೆಯು 62 ಭಾರತೀಯ ಮೀನುಗಾರಿಕೆ ದೋಣಿಗಳು ವಶಕ್ಕೆ ಪಡೆದಿದೆ ಮತ್ತು 462 ಭಾರತೀಯ ಮೀನುಗಾರರನ್ನು ಬಂಧಿಸಿ ಕಾನೂನು ಕ್ರಮಕ್ಕಾಗಿ ಅಧಿಕಾರಿಗಳಿಗೆ ಹಸ್ತಾಂತರಿಸಿದೆ ಎಂದು ನೌಕಾಪಡೆ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕ್‌ ಜಲಸಂಧಿಯು ತಮಿಳುನಾಡು ಹಾಗೂ ಶ್ರೀಲಂಕಾ ನಡುವೆ ಸಮುದ್ರಮಾರ್ಗವನ್ನು ಪ್ರತ್ಯೇಕಿಸುತ್ತದೆ. ಹೆಚ್ಚು ಮೀನು ಸಿಗುವ ಕಾರಣ, ಎರಡೂ ರಾಷ್ಟ್ರಗಳ ಮೀನುಗಾರರ ನಡುವೆ ತಿಕ್ಕಾಟಕ್ಕೆ ಸಾಕ್ಷಿಯಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.