ವಾಷಿಂಗ್ಟನ್: 19 ಅಡಿ ಎತ್ತರದ ಡಾ. ಬಿ.ಆರ್ ಅಂಬೇಡ್ಕರ್‌ರವರ ಸಮಾನತೆಯ ಪ್ರತಿಮೆಯು ( Statue of Equality) ಇದೇ ಅಕ್ಟೋಬರ್ 14ರಂದು ಅಮೆರಿಕದ ಮೇರಿಲ್ಯಾಂಡ್‌ನಲ್ಲಿ ಅನಾವರಣಗೊಳ್ಳಲಿದೆ.
19 ಅಡಿ ಎತ್ತರದ ಈ ಪ್ರತಿಮೆಯು ವಿದೇಶಗಳಲ್ಲಿ ಸ್ಥಾಪಿಸಲಾಗಿರುವ ಅಂಬೇಡ್ಕರ್ ಅವರ ಅತಿ ದೊಡ್ಡ ಪ್ರತಿಮೆಯಾಗಿದೆ.
ಅಕೋಕೀಕ್ ನಗರದ 13 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಈ ಸ್ಥಳವು ಶ್ವೇತ ಭವನಕ್ಕೆ 21 ಕಿ.ಮೀ ದೂರದಲ್ಲಿದೆ.
ಇತ್ತೀಚಿಗೆ ಹೈದಾರಬಾದ್‌ನಲ್ಲಿ ಅನಾವರಣಗೊಂಡ 125 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆಯು ವಿಶ್ವದಲ್ಲಿಯೇ ಅತಿ ಎತ್ತರದ್ದಾಗಿದೆ. ಸಂವಿಧಾನ ಕರ್ತೃ ಅಂಬೇಡ್ಕರ್ ಅವರ ಜೀವನ ಸಂದೇಶವನ್ನು ಸಾರಲು ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ ಎಂದು ಸಂಘಟಕರು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.