ಕೊಲಂಬೊ: ಶ್ರೀಲಂಕಾದ ಜಲ ಗಡಿ ಪ್ರವೇಶಿಸಿ ಮೀನುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಶ್ರೀಲಂಕಾದ ನೌಕಾಪಡೆಯು 22 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿ, ನಾಲ್ಕು ದೋಣಿಗಳನ್ನು ವಶಕ್ಕೆ ಪಡೆದಿದೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
ಜಾಫ್ನಾ ಜಿಲ್ಲೆಯ ವಾಯವ್ಯ ಭಾಗದಲ್ಲಿ ಬುಧವಾರ ವಿಶೇಷ ಕಾರ್ಯಾಚರಣೆ ನಡೆಸಿ ಭಾರತೀಯ ಮೀನುಗಾರರನ್ನು ಬಂಧಿಸಿದ್ದು ಅವರು ತಮಿಳುನಾಡಿನವರಾಗಿದ್ದಾರೆ. ಇವರನ್ನು ಬಳಿಕ ಬಂದರಿಗೆ ಕರೆತಂದು ಮೀನುಗಾರಿಕೆ ಇಲಾಖೆ ಅಧಿಕಾರಿಗೆ ಹಸ್ತಾಂತರಿಸಲಾಯಿತು ಎಂದು ನೌಕಾಪಡೆ ತಿಳಿಸಿದೆ.
ತಮಿಳುನಾಡಿನ ಪಿಎಂಕೆ ಪಕ್ಷದ ಸಂಸ್ಥಾಪಕ ಡಾ.ಎಸ್.ರಾಮದಾಸ್, ಶ್ರೀಲಂಕಾ ನೌಕಾಪಡೆಯು ರಾಜ್ಯದ ಮೀನುಗಾರರನ್ನು ಬಂಧಿಸಿರುವುದನ್ನು ಕಟುವಾಗಿ ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.