ADVERTISEMENT

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಪ್ರಕರಣ: 26 ಮಂದಿ ಬಂಧನ

ಪಿಟಿಐ
Published 31 ಡಿಸೆಂಬರ್ 2020, 10:13 IST
Last Updated 31 ಡಿಸೆಂಬರ್ 2020, 10:13 IST
ಧ್ವಂಸಗೊಂಡ ದೇವಾಲದ ಬಳಿ ನಿಂತಿರುವ ಪೊಲೀಸ್‌ ಸಿಬ್ಬಂದಿ
ಧ್ವಂಸಗೊಂಡ ದೇವಾಲದ ಬಳಿ ನಿಂತಿರುವ ಪೊಲೀಸ್‌ ಸಿಬ್ಬಂದಿ   

ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಆರೋಪದಡಿಜಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ ನಾಯಕ ರೆಹಮತ್ ಸಲಾಮ್ ಖಟ್ಟಕ್‌ ಅವರನ್ನು ಕೂಡ ಬಂಧಿಸಲಾಗಿದೆ. ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ತೆರಿ ಗ್ರಾಮದಲ್ಲಿರುವ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ರೆಹಮನ್ತುಲ್ಲಾ ಖಾನ್‌ ಅವರು ತಿಳಿಸಿದರು.

ಹಿಂದೂ ದೇವಾಲಯದ ನವೀಕರಣವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ಜಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ ಬೆಂಬಲಿಗರು ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಅವರು ತಿಳಿಸಿದರು.

ADVERTISEMENT

ಹಿಂದೂ ಸಮುದಾಯ ಮತ್ತು ಮಾನವ ಹಕ್ಕುಗಳ ಹೋರಾಟಗಾರರು ಈ ಕೃತ್ಯವನ್ನು ಖಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.