ADVERTISEMENT

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಭದ್ರತಾ ಪಡೆಗಳಿಂದ ಗುಂಡಿನ ದಾಳಿ: ಮೂವರ ಸಾವು

ಪಿಟಿಐ
Published 14 ಮೇ 2024, 5:06 IST
Last Updated 14 ಮೇ 2024, 5:06 IST
<div class="paragraphs"><p>ಗುಂಡಿನ ದಾಳಿ</p></div>

ಗುಂಡಿನ ದಾಳಿ

   

ಇಸ್ಲಾಮಾಬಾದ್: ಬೆಲೆ ಏರಿಕೆ, ದುಬಾರಿ ವಿದ್ಯುತ್‌ ಬಿಲ್‌ ಹಾಗೂ ತೆರಿಗೆ ವಿರೋಧಿಸಿ ಪಾಕ್‌ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ನಡೆಯುತ್ತಿರುವ ಮುಷ್ಕರ ಮುಂದುವರಿದಿದೆ.

ರಾಜಧಾನಿ ಮುಜಫರಾಬಾದ್‌ನಲ್ಲಿ ಭದ್ರತಾ ಪಡೆಗಳು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ ಮೂವರು ಮೃತಪಟ್ಟು, 6 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ADVERTISEMENT

ಹಣದುಬ್ಬರ, ಬೆಲೆ ಏರಿಕೆ ವಿರೋಧಿಸಿ ಶುಕ್ರವಾರದಿಂದ ಪೂರ್ಣ ಬಂದ್ ಆಚರಿಸಲಾಗುತ್ತಿದ್ದು, ಜನಜೀವನ ಬಹುತೇಕ ಸ್ಥಗಿತವಾಗಿದೆ.

ಪರಿಸ್ಥಿತಿ ನಿಯಂತ್ರಿಸುವ ಕ್ರಮವಾಗಿ ಹೋರಾಟಗಾರರು ಹಾಗೂ ಸರ್ಕಾರದ ಪ್ರತಿನಿಧಿಗಳ ನಡುವೆ ಮಾತುಕತೆ ನಡೆದಿದೆ. ಇದರ ಹಿಂದೆಯೇ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್ ಅವರು, ಈ ವಲಯದಲ್ಲಿ ಪರಿಹಾರ ಕ್ರಮಗಳಿಗಾಗಿ ಹಣ ಬಿಡುಗಡೆ ಮಾಡಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸುವ ಕ್ರಮವಾಗಿ ಪಾಕಿಸ್ತಾನ ಸರ್ಕಾರ ಒಟ್ಟು ₹2300 ಕೋಟಿ ಮೊತ್ತವನ್ನು ಈ ವಲಯಕ್ಕಾಗಿ ಹಂಚಿಕೆ ಮಾಡಿದೆ.

ಜಮ್ಮು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಎಸಿ) ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕಡಿಮೆ ವೆಚ್ಚದಲ್ಲಿ ವಿದ್ಯುತ್ ಪೂರೈಸಬೇಕು ಹಾಗೂ ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಪೂರೈಸಬೇಕು ಎಂಬುದು ಪ್ರತಿಭಟನಕಾರರ ಪ್ರಮುಖ ಬೇಡಿಕೆಯಾಗಿದೆ.

ಹೋರಾಟಗಾರರು ಮತ್ತು ಪೊಲೀಸರ ನಡುವೆ ಇಲ್ಲಿ ಶನಿವಾರ ಘರ್ಷಣೆ ನಡೆದಿದ್ದು, ಒಬ್ಬ ಪೊಲೀಸ್‌ ಅಧಿಕಾರಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.