ADVERTISEMENT

ಇರಾನ್ ದಾಳಿ: ಪಾಕಿಸ್ತಾನದ ನಾಲ್ವರು ಭದ್ರತಾ ಸಿಬ್ಬಂದಿ ಸಾವು

ಐಎಎನ್ಎಸ್
Published 19 ಜನವರಿ 2023, 8:29 IST
Last Updated 19 ಜನವರಿ 2023, 8:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್‌: ಪಾಕಿಸ್ತಾನದ ಸಶಸ್ತ್ರ ಪಡೆಗಳ ಮೇಲೆ ಇರಾನ್‌ ಮೂಲಕ ಭಯೋತ್ಪಾದಕರು ದಾಳಿ ನಡೆಸಿದ್ದು, ಘಟನೆಯಲ್ಲಿ ಪಾಕ್‌ನ ನಾಲ್ವರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ.

ಬಲೂಚಿಸ್ತಾನದ ಪಂಜ್‌ಗುರ್ ಜಿಲ್ಲೆಯ ಚುಕಾಬ್ ಪ್ರದೇಶದಲ್ಲಿ ಪಾಕಿಸ್ತಾನ-ಇರಾನ್‌ ಗಡಿಯುದ್ದಕ್ಕೂ ಗಸ್ತು ತಿರುಗುತ್ತಿದ್ದ ಭದ್ರತಾ ಸಿಬ್ಬಂದಿಯ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಈ ದಾಳಿ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಮತ್ತು ಅಫ್ಗಾನ್ ಗಡಿಯಾದ್ಯಂತ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳನ್ನು ಶಮನಗೊಳಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ADVERTISEMENT

ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಟಿಟಿಪಿ, ಅಫ್ಗಾನಿಸ್ತಾನದಲ್ಲಿ ಮರುಸಂಘಟನೆಯ ರೂಪ ಪಡೆದುಕೊಂಡಿದೆ.

ಉಗ್ರಗಾಮಿಗಳ ಚಟುವಟಿಕೆಗಳು ಮುಖ್ಯವಾಗಿ ಬಲೂಚಿಸ್ತಾನ್ ಮತ್ತು ಖೈಬರ್ ಪಖ್ತುಂಖ್ವಾದಲ್ಲಿ ಕೇಂದ್ರೀಕೃತವಾಗಿವೆ ಎಂದು ಪಾಕ್‌ ಆಂತರಿಕ ಸಚಿವ ರಾಣಾ ಸನಾವುಲ್ಲಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.