ಜುಬಾ: ಇಲ್ಲಿನ ಅಬೈ ಪ್ರದೇಶದಲ್ಲಿ ಸಶಸ್ತ್ರಧಾರಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯ ಸಿಬ್ಬಂದಿ ಸೇರಿದಂತೆ 54 ಮಂದಿ ಮೃತಪಟ್ಟಿದ್ದು, 64 ಮಂದಿ ಗಾಯಗೊಂಡಿದ್ದಾರೆ.
ಗ್ರಾಮಸ್ಥರ ಮೇಲೆ ದುಷ್ಕರ್ಮಿಗಳ ಗುಂಪು ಶನಿವಾರ ದಾಳಿ ನಡೆಸಿದ್ದು, ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಯೆರ್ ಬುಡಕಟ್ಟಿಗೆ ಸೇರಿದ ಯುವಕರು ಈ ದಾಳಿ ನಡೆಸಿದ್ದು, ಭೂ ವಿವಾದಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದೂ ಶಂಕಿಸಿದ್ದಾರೆ.
ಈ ಪ್ರದೇಶದಲ್ಲಿ ಜನಾಂಗೀಯ ಹಿಂಸಾಚಾರಗಳು ಸಾಮಾನ್ಯವಾಗಿವೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.