ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಇಂದು (ಭಾನುವಾರ) ಬೆಳಿಗ್ಗೆ 6.1 ತೀವ್ರತೆಯ ಭೂಕಂಪ ಸಂಭವಿಸಿದೆ.
ಯಾವುದೇ ಹಾನಿ ಬಗ್ಗೆ ವರದಿಯಾಗಿಲ್ಲ. ಧಾಡಿಂಗ್ ಜಿಲ್ಲೆಯಲ್ಲಿ ಬೆಳಿಗ್ಗೆ 7:39ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಬಾಗ್ಮತಿ ಮತ್ತು ಗಂಡಕಿ ಪ್ರಾಂತ್ಯಗಳ ಇತರ ಜಿಲ್ಲೆಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅ.16ರಂದು ನೇಪಾಳದ ಸುದುರ್ಪಶ್ಚಿಮ್ ಪ್ರಾಂತ್ಯದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.