ADVERTISEMENT

ಶ್ರೀಲಂಕಾದಲ್ಲಿ ಧಾರಾಕಾರ ಮಳೆ: 6 ಮಂದಿ ಸಾವು

ಪಿಟಿಐ
Published 24 ಮೇ 2024, 9:43 IST
Last Updated 24 ಮೇ 2024, 9:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಕೊಲಂಬೊ: ಶ್ರೀಲಂಕಾದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ದ್ವೀಪ ರಾಷ್ಟ್ರ ಜರ್ಜರಿತಗೊಂಡಿದೆ. ಶುಕ್ರವಾರ ಮಳೆ ಸಂಬಂಧಿತ ಅವಘಡದಲ್ಲಿ 6 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

'ಧಾರಾಕಾರ ಮಳೆಯಿಂದಾಗಿ ಸುಮಾರು 1,346 ಮನೆಗಳಿಗೆ ಹಾನಿಯಾಗಿದೆ ಮತ್ತು ರೈಲು ಸೇವೆಗಳಿಗೆ ಅಡಚಣೆಯಾಗಿದೆ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

'4 ಜಿಲ್ಲೆಗಳಲ್ಲಿ ಭಾರಿ ಗಾಳಿ, ಮಳೆಯಿಂದಾಗಿ ಮರಗಳು ಬಿದ್ದು 6 ಜನ ಸಾವಿಗೀಡಾಗಿದ್ದಾರೆ. 34,000ಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ' ಎಂದು ವಿಪತ್ತು ನಿರ್ವಹಣಾ ಕೇಂದ್ರ (ಡಿಎಂಸಿ) ತಿಳಿಸಿದೆ.

25 ಜಿಲ್ಲೆಗಳ ಪೈಕಿ 18 ಜಿಲ್ಲೆಯಲ್ಲಿ ಕುಂಭದ್ರೋಣ ಮಳೆ, ಭಾರಿ ಗಾಳಿ ಹಾಗೂ ಪ್ರತಿಕೂಲ ಹವಾಮಾನ ಇದೆ ಎಂದು ಡಿಎಂಸಿ ತಿಳಿಸಿದೆ.

ಮರಗಳು ಹಾಗೂ ಬಂಡೆಗಳು ಹಳಿಗಳ ಮೇಲೆ ಬಿದ್ದು ರೈಲ್ವೆ ಸೇವೆಗೆ ಅಡ್ಡಿ ಉಂಟಾಗಿದೆ. ಹಾಗಾಗಿ ಕೆಲ ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೆ ವಿಭಾಗ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.