ಮಾಸ್ಕೊ: ರಷ್ಯಾದ ಕ್ಯಾಂಚಟ್ಕಿ ಪ್ರಾಂತ್ಯದ ಪೂರ್ವ ಕರಾವಳಿಯಲ್ಲಿ ಶನಿವಾರ 7.2 ತೀವ್ರತೆಯ ಭೂಕಂಪ ಸಂಭವಿಸಿದೆ.
ಕ್ಯಾಂಚಟ್ಕಿ ಪ್ರಾಂತ್ಯದಲ್ಲಿ ಭೂಪಂಕ ಸಂಭವಿಸಿರುವ ಬಗ್ಗೆ ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ.
ಇಲ್ಲಿನ ಕರಾವಳಿಯ ತೀರದಲ್ಲಿ ಭೂಮಿಯಿಂದ 30 ಕಿ.ಮೀ. ಒಳಗೆ ಕಂಪನ ಕೇಂದ್ರ ಬಿಂದು ದಾಖಲಾಗಿದೆ ಎಂದು ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.
ಭೂಕಂಪದಿಂದ ಸುನಾಮಿ ಸಂಭವಿಸಬಹುದು ಎಂದು ಅಮೆರಿಕದ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ ಮುನ್ಸೂಚನೆ ನೀಡಿದೆ.
ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.