ADVERTISEMENT

ಅಫ್ಗಾನಿಸ್ತಾನ | ಕಾಬೂಲ್‌ನಲ್ಲಿ ಸ್ಫೋಟ: ಒಂದು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಏಜೆನ್ಸೀಸ್
Published 24 ಅಕ್ಟೋಬರ್ 2024, 2:55 IST
Last Updated 24 ಅಕ್ಟೋಬರ್ 2024, 2:55 IST
<div class="paragraphs"><p>ಸ್ಫೋಟ –ಸಾಂದರ್ಭಿಕ ಚಿತ್ರ</p></div>

ಸ್ಫೋಟ –ಸಾಂದರ್ಭಿಕ ಚಿತ್ರ

   

ಕಾಬೂಲ್‌: ಕೇಂದ್ರ ಕಾಬೂಲ್‌ನ ಜನನಿಬಿಡ ಮಾರುಕಟ್ಟೆಯಲ್ಲಿ ಬುಧವಾರ ಗ್ರೆನೇಡ್‌ ಸ್ಫೋಟಗೊಂಡು ಒಬ್ಬರು ಮೃತಪಟ್ಟಿದ್ದಾರೆ. ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಫ್ಗಾನಿಸ್ತಾನ ಆಂತರಿಕ ಸಚಿವಾಲಯ ತಿಳಿಸಿದೆ.

ಇದು ಉದ್ದೇಶಿತ ದಾಳಿಯೇ ಎಂಬುದು ಇನ್ನಷ್ಟೇ ಖಚಿತವಾಗಬೇಕಿದೆ. ಗಾಯಗೊಂಡವರಲ್ಲಿ 3 ವರ್ಷದ ಬಾಲಕಿ ಹಾಗೂ 4 ವರ್ಷದ ಬಾಲಕನೂ ಇದ್ದಾರೆ. ವ್ಯಕ್ತಿಯೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

ದೇಶದ ಆಡಳಿತವನ್ನು ತಾಲಿಬಾನ್‌ 2021ರಲ್ಲಿ ವಶಕ್ಕೆ ಪಡೆದ ಬಳಿಕ ಅಫ್ಗಾನಿಸ್ತಾನದಲ್ಲಿ ಉಗ್ರಗಾಮಿ ಚಟುವಟಿಕೆಗಳು ಹೆಚ್ಚಾಗಿವೆ. ತಾಲಿಬಾನ್‌ ಹಾಗೂ ಶಿಯಾ ಸಮುದಾಯದವರನ್ನು ಗುರಿಯಾಗಿಸಿ ಆಗಾಗ್ಗೆ ದಾಳಿ ನಡೆಯುತ್ತಿರುತ್ತವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.