ವಾಷಿಂಗ್ಟನ್: ಅಮೆರಿಕದ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ವ್ಯವಸ್ಥೆಯಲ್ಲಿ ಬುಧವಾರ ಭಾರಿ ಪ್ರಮಾಣದ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ದೇಶದೊಳಗೆ ವಿಮಾನ ಸೇವೆ ಅಸ್ತವ್ಯಸ್ತಗೊಂಡಿತು.
ನೂರಾರು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದರೆ, ಹಲವು ವಿಮಾನಗಳ ಹಾರಾಟವನ್ನು ವಿಳಂಬಗೊಳಿಸಲಾಯಿತು.
‘ದೇಶದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಏರ್‌ಮಿಷನ್ ಸಿಸ್ಟಮ್‌ನ ಸಮಸ್ಯೆಗಳಿಂದಾಗಿ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಮಾಹಿತಿ ನೀಡುವುದಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಯಿತು. ಇದರಿಂದಾಗಿ ಹಲವು ವಿಮಾನಗಳ ಹಾರಾಟ ರದ್ದುಪಡಿಸಲಾಯಿತು. ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಲು ಯತ್ನಿಸಲಾಗುತ್ತಿದೆ’ ಎಂದು ಎಫ್‌ಎಎ ಪ್ರಕಟಣೆ ತಿಳಿಸಿದೆ.
ಸೈಬರ್ ದಾಳಿ ಅಲ್ಲ: ‘ಸೈಬರ್ ದಾಳಿಯ ಯಾವುದೇ ಪುರಾವೆಗಳಿಲ್ಲ, ಆದರೆ ಕಾರಣಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಅಧ್ಯಕ್ಷ ಜೋ ಬೈಡನ್ ಅವರು ಸಾರಿಗೆ ಇಲಾಖೆಗೆ ನಿರ್ದೇಶನ ನೀಡಿದ್ದಾರೆ’ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಟ್ವೀಟ್ ಮಾಡಿದ್ದಾರೆ.
ಅಮೆರಿಕದಲ್ಲಿ 1,200ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಗಿದ್ದು, 100ಕ್ಕೂ ಹೆಚ್ಚು ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನಗಳ ಸಂಚಾರ ಮೇಲ್ವಿಚಾರಣಾ ಸಂಸ್ಥೆ ‘ಫ್ಲೈಟ್‌ಅವೇರ್’ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.