ADVERTISEMENT

ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರ: 'ಸಮಾಲೋಚನೆಯೊಂದಿಗೆ ಸಮಸ್ಯೆ ಬಗೆಹರಿಸಿ'

ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಭಾರತದ ಸಲಹೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 6:44 IST
Last Updated 6 ಜನವರಿ 2021, 6:44 IST
ತಿರುಮೂರ್ತಿ
ತಿರುಮೂರ್ತಿ   

ವಿಶ್ವಸಂಸ್ಥೆ: ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆಯ ಬಗ್ಗೆ ಇರುವ ಆರೋಪಗಳ ಕುರಿತು ಸಂಬಂಧಪಟ್ಟ ಎಲ್ಲರೊಂದಿಗೂ ಸಮಾಲೋಚಿಸಿ ಸಮಸ್ಯೆ ಬಗೆಹರಿಸುವ ಕಾಳಜಿ ತೋರಬೇಕು ಎಂದು ಭಾರತ ವಿಶ್ವಸಂಸ್ಥೆಗೆ ಒತ್ತಾಯಿಸಿದೆ.

‘ಈ ವಿಷಯದಲ್ಲಿ ರಾಜಕೀಯ ಬೆರೆಸಬಾರದು. ಹಾಗೆ ಮಾಡುವುದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ‘ ಎಂದು ಹೇಳಿದೆ.

ಮಂಗಳವಾರ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವರ್ಚುವಲ್ ಸಭೆಯಲ್ಲಿ, ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ ಅವರು ಮಾತನಾಡಿ, ‘ಸಿರಿಯಾದಲ್ಲಿ ರಾಸಾಯನಿಕ ಶಸ್ತ್ರಾಸ್ತ್ರಗಳ ಬಳಕೆಯ ಆರೋಪ ಕುರಿತು ತನಿಖೆ ನಡೆಯುತ್ತಿದೆ. ಈ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕೆಂದು’ ಎಂದು ಒತ್ತಿ ಹೇಳಿದರು.

ADVERTISEMENT

ಸಿರಿಯಾದಲ್ಲಿ ದಶಕಗಳ ಕಾಲ ನಡೆದ ಸಂಘರ್ಷದ ಲಾಭವನ್ನುಭಯೋತ್ಪಾದಕ ಗುಂಪುಗಳು ಪಡೆದುಕೊಂಡಿವೆ. ಇವು, ಇಡೀ ಪ್ರದೇಶಕ್ಕೆ ಅಪಾಯ ಉಂಟುಮಾಡುತ್ತಿವೆ ಎಂದು ಅವರು ಇದೇ ವೇಳೆ ತಿಳಿಸಿದರು.

ಈ ವಿಷಯವನ್ನು ರಾಜಕೀಯಗೊಳಿಸುವುದರಿಂದ ಪ್ರಯೋಜನವಿಲ್ಲ. ಹಾಗಾಗಿ, ಸಂಬಂಧಿಸಿದವರು ಸಮಾಲೋಚನೆ ನಡೆಸುವ ಮೂಲಕ ಸಮಸ್ಯೆ ಇತ್ಯರ್ಥಗೊಳಿಸಲು ಪ್ರಯತ್ನಿಸಬೇಕು ಎಂದು ತಿರುಮೂರ್ತಿ ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.