ವಾಷಿಂಗ್ಟನ್: ಪಾಕಿಸ್ತಾನಕ್ಕೆ ಸುಮಾರು ₹8,607 ಕೋಟಿ ಮೌಲ್ಯದ ರಕ್ಷಣಾ ಸಾಮಗ್ರಿಗಳನ್ನು ಮಾರಾಟ ಮಾಡುವ ಪ್ರಸ್ತಾವಕ್ಕೆ ಅಮೆರಿಕ ಅನುಮೋದನೆ ನೀಡಿದೆ.
ಈ ಒಪ್ಪಂದದಿಂದಾಗಿ ಎಫ್–16 ಯುದ್ಧ ವಿಮಾನಗಳ ಬಳಕೆಗೆ ಸಂಬಂಧಿಸಿದಂತೆ ಅಮೆರಿಕ ನಿರಂತರ ಮೇಲ್ವಿಚಾರಣೆಯನ್ನೂ ನಡೆಸಲಿದೆ.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಡುವಿನ ಭೇಟಿಯ ಬಳಿಕ ಅಮೆರಿಕ ಈ ನಿರ್ಧಾರ ಪ್ರಕಟಿಸಿದೆ.
ಟ್ರಂಪ್ ನಿರ್ದೇಶನದ ಮೇರೆಗೆ 2018 ಜನವರಿಯಿಂದ ಪಾಕಿಸ್ತಾನಕ್ಕೆ ರಕ್ಷಣಾ ಸಹಕಾರ ನೀಡುವುದನ್ನು ಅಮೆರಿಕ ನಿಲ್ಲಿಸಿದೆ. ಈ ನಿಯಮ ಇನ್ನೂ ಜಾರಿಯಲ್ಲಿದೆ. ಆದರೆ ಹೊಸ ನಿರ್ಧಾರ ಎಫ್–16 ಯುದ್ಧ ವಿಮಾನಗಳ ಮೇಲ್ವಿಚಾರಣೆಗೆ ಸಹಕಾರಿಯಾಗಲಿದೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.
2018ರ ರಕ್ಷಣಾ ಸಹಕಾರ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಲವು ರಕ್ಷಣಾ ನೆರವನ್ನಷ್ಟೆ ಪುನರ್ ಸ್ಥಾಪಿಸಿದ್ದೇವೆ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.