ADVERTISEMENT

ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು: ಈ ವರ್ಷದಲ್ಲಿ ಇದು 10ನೇ ಘಟನೆ

ಏಜೆನ್ಸೀಸ್
Published 6 ಏಪ್ರಿಲ್ 2024, 2:43 IST
Last Updated 6 ಏಪ್ರಿಲ್ 2024, 2:43 IST
<div class="paragraphs"><p>ಸಾವು (ಸಾಂಕೇತಿಕ ಚಿತ್ರ)</p></div>

ಸಾವು (ಸಾಂಕೇತಿಕ ಚಿತ್ರ)

   

ನ್ಯೂಯಾರ್ಕ್‌: ಅಮೆರಿಕದ ಓಹಿಯೊ ರಾಜ್ಯದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ ಎಂದು ಅಮೆರಿಕದ ಪೊಲೀಸರು ತಿಳಿಸಿದ್ದಾರೆ. 

ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ವಿದ್ಯಾರ್ಥಿ ಸಾವಿನ ಬಗ್ಗೆ ಖಚಿತಪಡಿಸಿದೆ. ಆದರೆ ಸಾವಿನ ಕಾರಣ ತಿಳಿದು ಬಂದಿಲ್ಲ, ಈ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ಹೇಳಿದೆ.

ADVERTISEMENT

ಮೃತ ವಿದ್ಯಾರ್ಥಿಯನ್ನು ಉಮಾ ಸತ್ಯಸಾಯಿ ಗದ್ದೆ ಎಂದು ಗುರುತಿಸಲಾಗಿದೆ. ಓಹಿಯೊದ ವಿಶ್ವವಿದ್ಯಾಲಯವೊಂದರಲ್ಲಿ ಉಮಾ ಸತ್ಯಸಾಯಿ ಅಭ್ಯಾಸ ಮಾಡುತ್ತಿದ್ದರು. 

ವಿದ್ಯಾರ್ಥಿ ಸಾವು ದುರದೃಷ್ಟಕರ. ಉಮಾ ಸತ್ಯಸಾಯಿ ನಿಧನದಿಂದ ತೀವ್ರ ದುಃಖವಾಗಿದೆ. ಮೃತ ವಿದ್ಯಾರ್ಥಿಯ ಪಾರ್ಥಿವ ಶರೀರವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸುವುದು ಸೇರಿದಂತೆ ಅವರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಮಾಡಲಾಗುವುದು ಎಂದು ಭಾರತೀಯ ರಾಯಭಾರಿ ಕಚೇರಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

ಅಮೆರಿಕ ಪೊಲೀಸರು ತನಿಖೆ ಆರಂಭಿಸಿದ್ದು ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಯಭಾರಿ ಕಚೇರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಕಳೆದ ಮಾರ್ಚ್‌ ತಿಂಗಳಲ್ಲಿ ಭಾರತೀಯ ವಿದ್ಯಾರ್ಥಿ ಮೊಹಮ್ಮದ್ ಅರಾಫತ್ ನಿಗೂಢವಾಗಿ ಮೃತಪಟ್ಟಿದ್ದ. ಈ ವರ್ಷದ ಆರಂಭದಲ್ಲಿ ಹೈದರಾಬಾದ್‌ನ ವಿದ್ಯಾರ್ಥಿ ಸೈಯದ್‌ ಅಲಿ, ಇಂಡಿಯಾನದಲ್ಲಿ ನೀಲ್‌ ಆಚಾರ್ಯ, ಜಾರ್ಜಿಯಾದಲ್ಲಿ ವಿವೇಕ್‌ ಸೈನಿ ಅವರ ಹತ್ಯೆ ನಡೆದಿತ್ತು.

ಈ ವರ್ಷದಲ್ಲಿ ಇಲ್ಲಿಯವರೆಗೂ 10 ಭಾರತೀಯ ಮೂಲದ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.