ADVERTISEMENT

ಪಾಕ್‌ ಹಂಗಾಮಿ ಪ್ರಧಾನಿಯಾಗಿ ಅನ್ವರುಲ್‌ ಹಕ್‌ ಕಾಕರ್‌ ಪ್ರಮಾಣ ಸ್ವೀಕಾರ

ಪಿಟಿಐ
Published 14 ಆಗಸ್ಟ್ 2023, 23:30 IST
Last Updated 14 ಆಗಸ್ಟ್ 2023, 23:30 IST
ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರುಲ್‌ – ಹಖ್‌– ಕಾಕರ್‌ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ಆರಿಫ್‌ ಅಲ್ವಿ ಪ್ರಮಾಣ ವಚನ ಬೋಧಿಸಿದರು 
ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಅನ್ವರುಲ್‌ – ಹಖ್‌– ಕಾಕರ್‌ ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ಆರಿಫ್‌ ಅಲ್ವಿ ಪ್ರಮಾಣ ವಚನ ಬೋಧಿಸಿದರು     ಪಿಟಿಐ ಚಿತ್ರ

ಇಸ್ಲಾಮಾಬಾದ್‌: ಬಲೂಚಿಸ್ತಾನದ ಪುಶ್ತುನ್ ಜನಾಂಗದ ನಾಯಕ ಅನ್ವರುಲ್‌ ಹಖ್‌ ಕಾಕರ್‌ ಅವರು ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಕಾಕರ್‌ ಅವರು ಸೇನೆಗೆ ಅತ್ಯಂತ ನಿಕಟರಾಗಿದ್ದಾರೆ. ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆದು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೆ ಇವರು ಹಂಗಾಮಿ ಪ್ರಧಾನಿಯಾಗಿ ಆಡಳಿತ ನಡೆಸಲಿದ್ದಾರೆ.

ಅಧ್ಯಕ್ಷರ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷ ಆರಿಫ್ ಅಲ್ವಿ ಅವರು ಕಾಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಹಲವಾರು ಉನ್ನತ ನಾಯಕರು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.