ಜೆರುಸೆಲಂ: ಗಾಜಾ ಆಸ್ಪತ್ರೆ ಮೇಲಿನ ಭೀಕರ ದಾಳಿ ಬಳಿಕ ಇಸ್ರೇಲ್ ರಕ್ಷಣೆಯನ್ನು ಬೆಂಬಲಿಸಲು ಅಮೆರಿಕ ನೇತೃತ್ವದ ರಾಜತಾಂತ್ರಿಕ ಪ್ರಯತ್ನಗಳು ಹಳಿತಪ್ಪಿದೆ.
ಅವಘಡದಿಂದಾಗಿ ಜೋರ್ಡಾನ್‌ನ ಅಮ್ಮನ್‌ನಲ್ಲಿ ಆಯೋಜಿಸಿದ್ದ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಇತರ ಅರಬ್ ನಾಯಕರ ನಡುವಿನ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ.
ಇಸ್ರೇಲ್‌ಗೆ ಬೆಂಬಲ ನೀಡುವ ಮೂಲಕ ಒಗ್ಗಟ್ಟಿನ ಭೇಟಿಗಾಗಿ ಬಿಡೆನ್ ಇಂದು ಇಸ್ರೇಲ್‌ಗೆ ಆಗಮಿಸಲಿದ್ದಾರೆ.
ಜೋರ್ಡಾನ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಅವರು, ಈಜಿಪ್ಟ್‌ನ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸ್ಸಿ ಮತ್ತು ಪ್ಯಾಲೆಸ್ಟೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಬೈಡ್‌ನ್ ನಡೆಸಬೇಕಿದ್ದ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ‘ದುರಂತಕ್ಕೆ ಗಾಜಾದಲ್ಲಿನ ಭಯೋತ್ಪಾದಕರೇ ಹೊಣೆಗಾರರಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.