ಬಾಗ್ದಾದ್: ಇರಾಕ್‌ನ ಹಮ್ದನಿಯಾ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಮದುವೆ ಸಮಾರಂಭವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾದ್ದಾರೆ. ಸುಮಾರು150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಪಟಾಕಿಯಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.