ಮೆಲ್ಬರ್ನ್: ಭಾರತದಲ್ಲಿರುವ ಆಸ್ಟ್ರೇಲಿಯಾದ ನಾಗರಿಕರು ಸೋಮವಾರದ ನಂತರ ಸ್ವದೇಶಕ್ಕೆ ಹಿಂತಿರುಗುವುದನ್ನು ಆಸ್ಟ್ರೇಲಿಯಾ ಸರ್ಕಾರ ನಿಷೇಧಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ ಭಾರಿ ಮೊತ್ತದ ದಂಡ ವಿಧಿಸಲಾಗುವುದು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಈ ತಾತ್ಕಾಲಿಕ ನಿಷೇಧವು ಸೋಮವಾರದಿಂದ ಆರಂಭವಾಗಲಿದೆ. ಆಸ್ಟ್ರೇಲಿಯಾದಿಂದ ಭಾರತಕ್ಕೆ ಭೇಟಿ ನೀಡಿ 14 ದಿನಗಳವರೆಗೆ ಇರುವ ನಾಗರಿಕರಿಗೆ ಈ ನಿಯಮ ಅನ್ವಯವಾಗಲಿದೆ.
ಭಾರತದಲ್ಲಿ ಕೋವಿಡ್ ತೀವ್ರವಾಗಿ ಉಲ್ಬಣಿಸಿರುವ ಕಾರಣಕ್ಕಾಗಿ ಆಸ್ಟ್ರೇಲಿಯಾವು ಈ ತಾತ್ಕಾಲಿಕ ನಿಷೇಧಕ್ಕೆ ಮುಂದಾಗಿದೆ. ಈ ನಿಯಮ ಉಲ್ಲಂಘಿಸುವವರಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ₹ 37 ಲಕ್ಷ (66 ಸಾವಿರ ಆಸ್ಟ್ರೇಲಿಯನ್ ಡಾಲರ್) ಮೊತ್ತದ ಭಾರಿ ದಂಡ ವಿಧಿಸಲು ಅಲ್ಲಿನ ಸರ್ಕಾರ ಮುಂದಾಗಿದೆ.
‘ಭಾರತದಲ್ಲಿ, ಆಸ್ಟ್ರೇಲಿಯಾದ ಸುಮಾರು 9 ಸಾವಿರ ನಾಗರಿಕರಿದ್ದು ಅದರಲ್ಲಿ 600ಕ್ಕೂ ಹೆಚ್ಚು ಮಂದಿ ಅಸುರಕ್ಷಿತ ಸ್ಥಿತಿಯಲ್ಲಿದ್ದಾರೆ’ ಎಂದು ‘ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್’ ಪತ್ರಿಕೆಯು ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.