ADVERTISEMENT

ಕೊರೊನಾ ಬಿಕ್ಕಟ್ಟು: ವಿದೇಶಿ ಪ್ರಯಾಣಿಕರ ಸಂಖ್ಯೆಗೆ ಕಡಿವಾಣ ಹಾಕಿದ ಆಸ್ಟ್ರೇಲಿಯಾ

ಏಜೆನ್ಸೀಸ್
Published 2 ಜುಲೈ 2021, 9:49 IST
Last Updated 2 ಜುಲೈ 2021, 9:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕ್ಯಾನ್‌ಬೆರಾ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರ ಸಂಖ್ಯೆ ಮೇಲೆ ಕಡಿವಾಣ ಹಾಕಲು ಆಸ್ಟ್ರೇಲಿಯಾ ಸರ್ಕಾರ ತೀರ್ಮಾನಿಸಿದೆ.

ಸೋಂಕು ನಿಯಂತ್ರಣಕ್ಕಾಗಿ ಕೆಲವು ನಗರಗಳಲ್ಲಿ ಜಾರಿಗೊಳಿಸಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಿದ್ದ ಬೆನ್ನಲ್ಲೆ, ಈಗ ವಿದೇಶಗಳಿಂದ ಬರುವ ಪ್ರಯಾಣಿಕರ ಸಂಖ್ಯೆ ಮೇಲೆ ಮಿತಿ ಹೇರಲು ನಿರ್ಧರಿಸಿದೆ. ಜುಲೈ 14ರಿಂದ ಜಾರಿಗೆ ಬರುವಂತೆ, ದೇಶಕ್ಕೆ ಬರುವ ಪ್ರಯಾಣಿಕರ ಸಂಖ್ಯೆಯನ್ನು ಶೇ 50ರಷ್ಟು ಕಡಿತಗೊಳಿಸಲು ತೀರ್ಮಾನಿಸಿದೆ.

‘ವಾರಕ್ಕೆ ಈಗ ಬರುತ್ತಿರುವ 6 ಸಾವಿರ ಪ್ರಯಾಣಿಕರ ಸಂಖ್ಯೆಯನ್ನು 3 ಸಾವಿರಕ್ಕೆ ನಿರ್ಬಂಧಿಸಲಾಗುತ್ತದೆ‘ ಎಂದು ಪ್ರಧಾನಿ ಸ್ಕಾಟ್‌ ಮಾರಿಸನ್ ತಿಳಿಸಿದ್ದಾರೆ.

ADVERTISEMENT

ಪ್ರತಿ ಬಾರಿ ಹೊರ ದೇಶದಿಂದ ಬರುವ ಪ್ರಯಾಣಿಕರನ್ನು ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಹೋಟೆಲ್‌ಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು, ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.