ವಿಯೆನ್ನಾ: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆಸ್ಟ್ರಿಯಾದಲ್ಲಿ ಸೋಮವಾರ ಬೆಳಗಿನ ಜಾವದಿಂದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
ಗರಿಷ್ಠ 20 ದಿನಗಳವರೆಗೆ ನಿಯಮಾವಳಿಗಳು ಇರುತ್ತವೆ. ಆದರೆ 10 ದಿನಗಳ ಬಳಿಕ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಜನರು ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ.
ಡಿ. 13ರ ವೇಳೆಗೆ ಲಾಕ್‌ಡೌನ್ ತೆರವು ಮಾಡಲು ಸಾಧ್ಯವಾಗಬಹುದು ಎನ್ನಲಾಗಿದೆ. ಆದರೆ ಲಸಿಕೆ ಪಡೆಯದವರಿಗೆ ಲಾಕ್‌ಡೌನ್ ನಿಯಮಾವಳಿಗಳು ಅನ್ವಯಿಸಲಿವೆ.
ಶನಿವಾರ ಆಸ್ಟ್ರಿಯಾದಲ್ಲಿ 15,297 ಪ್ರಕರಣಗಳು ವರದಿಯಾಗಿವೆ. ಒಂದು ವಾರದಿಂದ ಇಲ್ಲಿ ನಿತ್ಯ ಸುಮಾರು 10,000 ಪ್ರಕರಣಗಳು ವರದಿಯಾಗುತ್ತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.