ADVERTISEMENT

ಕೋಲ್ಕತ್ತದಲ್ಲಿ ಬಾಂಗ್ಲಾದೇಶದ ಸಂಸದ ನಾಪತ್ತೆ

ಪಿಟಿಐ
Published 21 ಮೇ 2024, 12:56 IST
Last Updated 21 ಮೇ 2024, 12:56 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕೋಲ್ಕತ್ತ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರು ಮೇ 12 ರಂದು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಕ್ಕೆ ಆಗಮಿಸಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಅವರು ನಾಪತ್ತೆಯಾಗಿದ್ದಾರೆ ಎಂದು ಕೋಲ್ಕತ್ತದಲ್ಲಿರುವ ಬಾಂಗ್ಲಾದೇಶದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್‌ನ ಸಂಸದ ಅನಾರ್ ಮೇ 13ರಿಂದ ನಾಪತ್ತೆಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ADVERTISEMENT

ವೈದ್ಯಕೀಯ ಚಿಕಿತ್ಸೆಗಾಗಿ ಮೇ 12ರಂದು ಕೋಲ್ಕತ್ತಗೆ ಬಂದಿದ್ದರು. ಬಳಿಕ ನಗರದ ನಗರದ ಉತ್ತರ ಭಾಗಕ್ಕೆ ಹೊಂದಿಕೊಂಡಿರುವ ಬಾರಾನಗರದಲ್ಲಿರುವ ಅವರ ಸ್ನೇಹಿತನ ಮನೆಯಲ್ಲಿ ತಂಗಿದ್ದರು. ಮೇ 13ರಂದು ಯಾರನ್ನೋ ಭೇಟಿಯಾಗಲು ಹೋದವರು ವಾಪಸ್ಸಾಗಿರಲಿಲ್ಲ. ನಂತರ ಅವರ ಸ್ನೇಹಿತ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಳೆದ 8 ದಿನಗಳಿಂದ ಅನಾರ್ ಅವರ ಸುಳಿವಿಲ್ಲ. ಹಾಗಿದ್ದರೂ ನವದೆಹಲಿಗೆ ತೆರಳಿವುದಾಗಿ ಅವರ ಫೋನ್‌ನಿಂದ ಕುಟುಂಬ ಸದಸ್ಯರಿಗೆ ಸಂದೇಶ ಕಳುಹಿಸಿರುವುದು ಗಮನಕ್ಕೆ ಬಂದಿದೆ. ನಾವು ಪೊಲೀಸರು ಮತ್ತು ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.