ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಪ್ರಸಕ್ತ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯೂ ಆಗಿರುವ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಪರ ಪ್ರಚಾರ ನಡೆಸಲಿದ್ದಾರೆ.
ಅಮೆರಿಕದ ಅಧ್ಯಕ್ಷೀಯ ಸ್ಥಾನಕ್ಕೆ ನ. 5ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಮಲಾ ಅವರ ಪರ ಒಬಾಮಾ ಅವರು ಪಿಟ್ಸ್‌ಬರ್ಗ್ ಮೂಲಕ ಪ್ರಚಾರ ಆರಂಭಿಸಲಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.
ಒಬಾಮಾ ಅವರೊಂದಿಗೆ ಅವರ ಪತ್ನಿ ಮಿಷೆಲ್ ಕೂಡಾ ಪಾಲ್ಗೊಂಡು, ಕಮಲಾ ಪರ ಮತ ಯಾಚಿಸಲಿದ್ದಾರೆ.
ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಅಧ್ಯಕ್ಷೀಯ ಚುನಾವಣಾ ರೇಸ್‌ನಿಂದ ಹಿಂದಕ್ಕೆ ಸರಿದ ನಂತರ, ಕಮಲಾ ಹ್ಯಾರಿಸ್ ಅವರನ್ನು ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ಎಂದು ಡೆಮಾಕ್ರಟಿಕ್ ಪಕ್ಷವು ಕಳೆದ ಜುಲೈನಲ್ಲಿ ಘೋಷಿಸಿತು. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸ್ಪರ್ಧಿಸಿದ್ದಾರೆ. ಇಬ್ಬರ ನಡುವೆ ತುರುಸಿನ ಪೈಪೋಟಿ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.