ADVERTISEMENT

Typhoon Doksuri | ‘ದೊಕ್ಸುರಿ’ ಚಂಡಮಾರುತ: ಬೀಜಿಂಗ್‌ನಲ್ಲಿ ಕಟ್ಟೆಚ್ಚರ

​ಪ್ರಜಾವಾಣಿ ವಾರ್ತೆ
Published 29 ಜುಲೈ 2023, 13:46 IST
Last Updated 29 ಜುಲೈ 2023, 13:46 IST
ಚೀನಾದ ಫುಜಿಯಾನ್ ಪ್ರಾಂತ್ಯದ ಪ್ರವಾಹಪೀಡಿತ ಪ್ರದೇಶದ ಜಲಾವೃತ ರಸ್ತೆಯಲ್ಲಿ ಸಾಗಿದ ಜನರು
ಚೀನಾದ ಫುಜಿಯಾನ್ ಪ್ರಾಂತ್ಯದ ಪ್ರವಾಹಪೀಡಿತ ಪ್ರದೇಶದ ಜಲಾವೃತ ರಸ್ತೆಯಲ್ಲಿ ಸಾಗಿದ ಜನರು   (ಎಪಿ/ಪಿಟಿಐ ಚಿತ್ರ)

ಬೀಜಿಂಗ್: ‘ದೊಕ್ಸುರಿ’ ಚಂಡಮಾರುತದ ಪರಿಣಾಮ ಭಾರಿ ಮಳೆ ಸುರಿಯುತ್ತಿರುವ ಕಾರಣ ರಾಜಧಾನಿ ಸೇರಿದಂತೆ ಉತ್ತರ ಚೀನಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಫುಜಿಯಾನ್ ಪ್ರಾಂತ್ಯಕ್ಕೆ ಪ್ರಬಲ ಚಂಡಮಾರುತ ಶುಕ್ರವಾರ ಅಪ್ಪಳಿಸಿದ್ದು, ಗಂಟೆಗೆ 175 ಕಿ.ಮೀ ವೇಗದಲ್ಲಿ ಗಾಳಿ ಬೀಸಿತ್ತು. ಬಳಿಕ ಉತ್ತರದ ಕಡೆಗೆ ದಿಕ್ಕು ಬದಲಿಸಿದೆ ಎಂದು ಚೀನಾದ ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಧಾರಾಕಾರ ಮಳೆಯ ಪರಿಣಾಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಬೀಜಿಂಗ್‌ ಮತ್ತು ಸಮೀಪದ ಪ್ರಾಂತ್ಯಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಲಾಗಿದೆ ಎಂದೂ ವಿವರಿಸಿದ್ದಾರೆ.

ADVERTISEMENT

ಮುನ್ನೆಚ್ಚರಿಕಾ ಕ್ರಮವಾಗಿ ಉದ್ಯಾನಗಳನ್ನು ಮುಚ್ಚಲಾಗಿದೆ. ಸರೋವರ ಮತ್ತು ನದಿ ದಡದ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ನೆರೆ‌ಯ ಹೆಬೈ ಪ್ರಾಂತ್ಯದಲ್ಲೂ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಅಗತ್ಯವಿದ್ದರೆ ಮಾತ್ರ ಮನೆಗಳಿಂದ ಹೊರಬರಬೇಕು’ ಎಂದು ಫುಜಿಯಾನ್ ಪ್ರಾಂತ್ಯದ ಅಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.