ಬೀಜಿಂಗ್: ಓಮೈಕ್ರಾನ್ ಹೆಚ್ಚಳದ ಹಿನ್ನೆಲೆಯಲ್ಲಿ ಚೀನಾದ ರಾಜಧಾನಿ ಬೀಜಿಂಗ್‌ನಲ್ಲಿ ಮೆಟ್ರೊ ನಿಲ್ದಾಣ, ಶಾಲೆಗಳು, ವ್ಯಾಪಾರ– ವಹಿವಾಟು, ರೆಸ್ಟೋರೆಂಟ್ ಮತ್ತು ಜಿಮ್‌ಗಳನ್ನು ಬುಧವಾರದಿಂದ ಬಂದ್ ಮಾಡಲಾಗಿದೆ. ಅಲ್ಲದೆ ಸೋಂಕು ತಡೆಗಟ್ಟುವ ಕ್ರಮವಾಗಿ ಕೋವಿಡ್ ಪತ್ತೆ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ.
ಬೀಜಿಂಗ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 53 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 500ಕ್ಕೆ ಏರಿಕೆಯಾಗಿದ್ದು, ಕಠಿಣ ನಿರ್ಬಂಧಗಳನ್ನು ವಿಧಿಸಲಾಗುತ್ತಿದೆ. ಮುನ್ನಚ್ಚರಿಕೆ ಕ್ರಮವಾಗಿ ಶಾಲೆಗಳ ಪುನರಾರಂಭವನ್ನು ಮುಂದೂಡಲಾಗಿದೆ.
40 ಸುರಂಗ ಮಾರ್ಗಗಳನ್ನು ಮುಚ್ಚಲಾಗಿದೆ. ಶೇ 10ರಷ್ಟು ಬಸ್ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಬೀಜಿಂಗ್‌ನಿಂದ ಹೊರ ಹೋಗಲು ಕೋವಿಡ್ ನೆಗಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದಲ್ಲಿ ತಪಾಸಣೆಯನ್ನು ಬಿಗಿಗೊಳಿಸಲಾಗಿದೆ.
ಚೀನಾದ ವಾಣಿಜ್ಯ ರಾಜಧಾನಿ ಶಾಂಘೈನಲ್ಲಿ ಕಳೆದೊಂದು ತಿಂಗಳಿಂದ ಲಾಕ್‌ಡೌನ್ ಜಾರಿಯಲ್ಲಿದ್ದು, ಅಲ್ಲಿ ಬುಧವಾರ ಹೊಸದಾಗಿ 4,982 ಪ್ರಕರಣಗಳು ದೃಢಪಟ್ಟಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.