ಬ್ರಸೆಲ್ಸ್: ಬೇಹುಗಾರಿಕೆ ನಡೆಸಿರುವ ಆರೋಪದ ಮೇಲೆ ರಷ್ಯಾದ 21 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ದೇಶದಿಂದ ಹೊರಹಾಕಿರುವುದಾಗಿಬೆಲ್ಜಿಯಂನ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ.
ಬ್ರಸೆಲ್ಸ್‌ನಲ್ಲಿರುವ ರಾಯಭಾರ ಕಚೇರಿ ಮತ್ತು ಆಂಟ್ವೆರ್ಪ್‌ನಲ್ಲಿರುವ ಕಾನ್ಸುಲೇಟ್ ಕಚೇರಿಯಲ್ಲಿ ರಷ್ಯಾದ 21 ಮಂದಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದರು. ಅವರೆಲ್ಲರಿಗೂ ರಾಜತಾಂತ್ರಿಕ ಅಧಿಕಾರಿಗಳ ಮಾನ್ಯತೆ ನೀಡಲಾಗಿತ್ತು. ಆದರೆ, ಅವರು ಬೇಹುಗಾರಿಕೆ ನಡೆಸುವುದು ಹಾಗೂ ಕಾರ್ಯಾಚರಣೆಗಳ ಮೇಲೆ ಪ್ರಭಾವ ಬೀರುವುದರಲ್ಲಿ ನಿರತರಾಗಿದ್ದರು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
ನೆದರ್ಲೆಂಡ್ಸ್ ವಿದೇಶಾಂಗ ಸಚಿವಾಲಯ ಸಹ ರಷ್ಯಾದ 17 ಮಂದಿ ರಾಜತಾಂತ್ರಿಕ ಅಧಿಕಾರಿಗಳನ್ನು ದೇಶದಿಂದ ಹೊರಹಾಕಿದೆ. ಮಾನ್ಯತೆ ಪಡೆದಿರುವ ಅಧಿಕಾರಿಗಳು ಗೂಢಚಾರಿಕೆ ನಡೆಸುತ್ತಿರುವ ಬಗ್ಗೆ ಭದ್ರತಾ ಪಡೆಗಳಿಂದ ಮಾಹಿತಿ ಲಭ್ಯವಾದ ಬೆನ್ನಲ್ಲೇ ಡಚ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಇನ್ನಷ್ಟು ಓದು....
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.