ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ತಮ್ಮ ಪಕ್ಷಗಳಿಂದ ಸ್ಪರ್ಧಿಸಕು ಆಯ್ಕೆಯಾಗಿದ್ದಾರೆ. ಬರುವ ನವೆಂಬರ್‌ನಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ.
ಜೋ ಬೈಡನ್ ಅವರು ಇಂಡಿಯಾನಾ ಡೆಮಾಕ್ರಟಿಕ್ ಮತ್ತು ಡೊನಾಲ್ಡ್ ಟ್ರಂಪ್ ಅವರು ರಿಪಬ್ಲಿಕನ್ ಪಕ್ಷದಿಂದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಇಂಡಿಯಾನಾ ಡೆಮಾಕ್ರಟಿಕ್ ಪಕ್ಷದ ಒಟ್ಟು 79 ಜನ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿಗಳ ಪೈಕಿ ಜೋ ಬೈಡನ್ ಗೆಲುವು ಸಾಧಿಸಿದ್ದಾರೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಗಳ ಪೈಕಿ ಟ್ರಂಪ್ ಮಾತ್ರ ಸಕ್ರಿಯರಾಗಿದ್ದಾರೆ.
1912ರ ಬಳಿಕ ಅಮೆರಿಕದಲ್ಲಿ ಇದೇ ಮೊದಲಿಗೆ ಹಾಲಿ ಅಧ್ಯಕ್ಷ ಮತ್ತು ಮಾಜಿ ಅಧ್ಯಕ್ಷರು ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.