ಪೆಶಾವರ: ಪಾಕಿಸ್ತಾನದ ವಾಯವ್ಯ ಭಾಗದ ನಗರ ಪೆಶಾವರದ ಮಸೀದಿಯೊಂದರಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು, 25 ಮಂದಿ ಮೃತಪಟ್ಟು, 120 ಮಂದಿ ಗಾಯಗೊಂಡಿದ್ದಾರೆ.
ಪೊಲೀಸ್ ಲೈನ್ ಪ್ರದೇಶದಲ್ಲಿರುವ ಮಸೀದಿಯಲ್ಲಿ ಮಧ್ಯಾಹ್ನದ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡ. ಘಟನೆಯಲ್ಲಿ ಮಸೀದಿಯ ಕಟ್ಟಡದ ಒಂದು ಭಾಗ ಕುಸಿದುಬಿದ್ದಿದ್ದು, ಅದರ ಅಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿರುವ ಆತಂಕ ಇದೆ ಎಂದು ಭದ್ರತಾ ಮತ್ತ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಹೆಚ್ಚಿನವರು ಪೊಲೀಸರು. ಈ ಪೈಕಿ 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪೆಶಾವರದ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದ್ದು, ಸಂತಸ್ತರಿಗಾಗಿ ರಕ್ತದಾನ ಮಾಡುವಂತೆ ನಾಗರಿಕರಲ್ಲಿ ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.