ಬ್ರೆಜಿಲ್: ಒಂದೇ ವಾರದಲ್ಲಿ ಎರಡು ಬಾರಿ ಹೃದಯಾಘಾತ ಸಂಭವಿಸಿದ ಪರಿಣಾಮ ಬ್ರೆಜಿಲ್‌ನ ಫಿಟ್ನೆಸ್ ಇನ್‌ಫ್ಲುಯೆನ್ಸರ್ ಲಾರಿಸ್ಸಾ ಬೋರ್ಗಸ್ (33) ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಲಾರಿಸ್ಸಾ ಮೃತಪಟ್ಟಿರುವುದನ್ನು ಅವರ ಕುಟುಂಬ ಖಚಿತಪಡಿಸಿದೆ. ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡ ಕುಟುಂಬ ಸದಸ್ಯರು, ಸಣ್ಣ ವಯಸ್ಸಿನ ಸದಸ್ಯರೊಬ್ಬರನ್ನು ಕಳೆದುಕೊಳ್ಳುವುದು ನೋವಿನ ಸಂಗತಿಯಾಗಿದೆ. ಹೃದಯ ಭಾರವಾಗಿದೆ, ಈ ಪರಿಸ್ಥಿತಿಯನ್ನು ವಿವರಿಸಲು ಕಷ್ಟವಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಲಾರಿಸ್ಸಾ ಅವರಿಗೆ ಆಗಸ್ಟ್ 20ರಂದು ಮೊದಲ ಭಾರಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಕೋಮಾಗೆ ಹೋಗಿದ್ದು, ವಾರದಲ್ಲಿಯೇ ಎರಡನೇ ಬಾರಿ ಹೃದಯಾಘಾತವಾಗಿದೆ. ಹೀಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಲಾರಿಸ್ಸಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಹೃದಯ ಸಮಸ್ಯೆ ಎದುರಾದಾಗ ಅವರು ಆಲ್ಕೋಹಾಲ್ ಸೇವನೆ ಮಾಡಿದ್ದರು ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.
ಲಾರಿಸ್ಸಾ ಪ್ರತಿದಿನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರ ಫಿಟ್ನೆಸ್, ಫ್ಯಾಷನ್, ಟ್ರಾವೆಲ್ ಬಗೆಗಿನ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.