ಬೀಜಿಂಗ್: ಬಹು ಪಕ್ಷೀಯತೆ, ಜಾಗತಿಕ ಆಡಳಿತಕ್ಕೆ ಬಲ ಮತ್ತು ರಾಷ್ಟ್ರೀಯ ಭದ್ರತೆಗೆ ಎದುರಾಗಲಿರುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿಬ್ರಿಕ್ಸ್ ರಾಷ್ಟ್ರಗಳ ಹಿರಿಯ ಭದ್ರತಾ ಅಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಎಲ್ಲಾ ವಿಚಾರಗಳಲ್ಲಿ ಬ್ರಿಕ್ಸ್ ದೇಶಗಳ ಭದ್ರತಾ ಅಧಿಕಾರಿಗಳು ಸಹಮತ ವ್ಯಕ್ತಪಡಿಸಿದ್ದಾರೆ.
ಬುಧವಾರ ವಿಡಿಯೊ ಕಾನ್ಪರೆನ್ಸ್ ಮೂಲಕ ನಡೆದ ಬ್ರಿಕ್ಸ್(ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ರಾಷ್ಟ್ರೀಯ ಭದ್ರತಾ ಸಲಹೆಗಾರರು ಮತ್ತು ರಾಷ್ಟ್ರೀಯ ಭದ್ರತಾ ಪ್ರತಿನಿಧಿಗಳ 12ನೇ ಸಭೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರು ಭಾಗವಹಿಸಿದ್ದರು.
‘ಯಾವುದೇ ರಾಜೀ ಇಲ್ಲದೆ, ಭಯೋತ್ಪಾದನೆ ವಿರುದ್ಧ ಎಲ್ಲರೂ ಸಹಕಾರ ನೀಡಬೇಕು’ ಎಂದು ಡೊಭಾಲ್ ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.