ADVERTISEMENT

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು; ತುರ್ತು ಪರಿಸ್ಥಿತಿ ಘೋಷಣೆ

ಏಜೆನ್ಸೀಸ್
Published 24 ಜುಲೈ 2022, 3:30 IST
Last Updated 24 ಜುಲೈ 2022, 3:30 IST
ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು
ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು   

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ಮೆರಿಪೊಸಾ ಕೌಂಟಿ ಪ್ರದೇಶದಲ್ಲಿ ಗವರ್ನರ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಯೊಸೆಮಿಟ್ ರಾಷ್ಟ್ರೀಯ ಉದ್ಯಾನವನದ ಬಳಿ ಬೆಂಕಿ ವೇಗವಾಗಿ ಆವರಿಸುತ್ತಿದೆ ಎಂದು ವರದಿಯಾಗಿದೆ.

ಪ್ರಸಕ್ತ ಸಾಲಿನಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಎದುರಾಗಿರುವ ಅತ್ಯಂತ ಭೀಕರ ಕಾಡ್ಗಿಚ್ಚು ಇದಾಗಿದೆ.

ಅರಣ್ಯ ಸಮೀಪದಲ್ಲಿ ವಾಸಿಸುತ್ತಿದ್ದ ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಲಾಗಿದ್ದು, 2,000ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಶುಕ್ರವಾರ ಅಪರಾಹ್ನ ಶುರುವಾಗಿರುವ ಕಾಡ್ಗಿಚ್ಚಿಗೆ ಎಕರೆ ಗಟ್ಟಲೆ ಪ್ರದೇಶ ನಾಶವಾಗಿದೆ ಎಂದು ಕ್ಯಾಲಿಫೋರ್ನಿಯಾ ಅರಣ್ಯ ಮತ್ತು ಅಗ್ನಿಶಾಮಕ ರಕ್ಷಣಾ ಇಲಾಖೆ ತಿಳಿಸಿದೆ.

6,000ಕ್ಕೂ ಹೆಚ್ಚು ನಾಗರಿಕರಿಗೆ ಸ್ಥಳಾಂತರ ಮಾಡುವ ಆದೇಶ ಹೊರಡಿಸಲಾಗಿದೆ ಎಂದು ಸಿಯೆರಾ ರಾಷ್ಟ್ರೀಯ ಅರಣ್ಯದ ವಕ್ತಾರ ಡ್ಯಾನಿಯಲ್ ಪ್ಯಾಟರ್ಸನ್ ತಿಳಿಸಿದ್ದಾರೆ.

400ಕ್ಕೂ ಹೆಚ್ಚು ಅಗ್ನಿಶಾಮಕದಳ, ಹೆಲಿಕಾಪ್ಟರ್, ವಿಮಾನಗಳ ಮೂಲಕ ಬೆಂಕಿ ನಂದಿಸುವ ಕಾರ್ಯಾಚರಣೆ ಜಾರಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.