ಒಟ್ಟಾವ: ದಕ್ಷಿಣ ಚೀನಾ ಸಮುದ್ರ ಪ್ರದೇಶಕ್ಕೆ ಸಂಬಂಧಿಸಿದಂತೆ ಫಿಲಿಪಿನ್ಸ್‌ಗೆ ಬೆಂಬಲ ನೀಡಿರುವ ಕೆನಡಾ ತನ್ನ ಸಾರ್ವಭೌಮತೆಯನ್ನು ಉಲ್ಲಂಘಿಸಿದೆ ಎಂದು ಚೀನಾ ಆರೋಪಿಸಿದೆ.
'ದಕ್ಷಿಣ ಚೀನಾ ಸಮುದ್ರವು ಇಲ್ಲಿನ ರಾಷ್ಟ್ರಗಳ ಸಾಮಾನ್ಯ ನೆಲೆಯಾಗಿದೆ. ಅದನ್ನು ಕೆನಡಾ, ಅಮೆರಿಕ ಮತ್ತು ಇತರ ರಾಷ್ಟ್ರಗಳು ತಮ್ಮ ರಾಜಕೀಯ ಹಿತಾಸಕ್ತಿಗಳಿಗಾಗಿ ದುರ್ಬಳಕೆ ಮಾಡಿಕೊಳ್ಳಬಾರದು' ಎಂದು ಕೆನಡಾದಲ್ಲಿರುವ ಚೀನಾ ರಾಯಭಾರಿ ಕಚೇರಿ ವಕ್ತಾರ ಗುರುವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ದಕ್ಷಿಣ ಚೀನಾ ಸಮುದ್ರದ ವಿವಾದಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಚೀನಾ ಮತ್ತು ಫಿಲಿಪಿನ್ಸ್ ಕಳೆದ ಕೆಲವು ತಿಂಗಳುಗಳಿಂದ ತಿಕ್ಕಾಟ ನಡೆಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.