ಬೀಜಿಂಗ್: ಬಾಹ್ಯಾಕಾಶದಲ್ಲಿರುವ ಕಚಡಾಗಳನ್ನು ತಗ್ಗಿಸುವ ತಂತ್ರಜ್ಞಾನವನ್ನು ಪರೀಕ್ಷಿಸುವ ಸಲುವಾಗಿಯೇ ಚೀನಾವು ಭಾನುವಾರ ಹೊಸ ಉಪಗ್ರಹವೊಂದನ್ನು ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಉಡಾಯಿಸಿದೆ.
‘ಶಿಜಾನ್–21‘ ಹೆಸರಿನ ಈ ಉಪಗ್ರಹವನ್ನು ಹೊತ್ತ ರಾಕೆಟ್ ಭಾನುವಾರ ಸಿಚುವಾನ್ ಪ್ರಾಂತ್ಯದ ಶಿಚಾಂಗ್ ಉಪಗ್ರಹಣ ಉಡಾವಣಾ ಕೇಂದ್ರದಿಂದ ನಭಕ್ಕೆ ಚಿಮ್ಮಿತು. ಅದು ಯೋಜಿತ ಕಕ್ಷೆಗೆ ಉಪಗ್ರಹವನ್ನು ಯಶಸ್ವಿಯಾಗಿ ಸೇರಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಕ್ಸಿನ್‌ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.