ADVERTISEMENT

ಬೀಜಿಂಗ್‌ನಲ್ಲಿ ಇದೇ 23ರಂದು ‘ಬ್ರಿಕ್ಸ್‌‌’ ಶೃಂಗ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 17:37 IST
Last Updated 17 ಜೂನ್ 2022, 17:37 IST
   

ಬೀಜಿಂಗ್‌:ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ಅನ್ನು ಒಳಗೊಂಡಿರುವ ‘ಬ್ರಿಕ್ಸ್’ ರಾಷ್ಟ್ರಗಳ 14ನೇ ಶೃಂಗಸಭೆ ಇದೇ 23 ರಂದು ಬೀಜಿಂಗ್‌ನಲ್ಲಿ ವಿಡಿಯೊ ಲಿಂಕ್ ಮೂಲಕ ನಡೆಯಲಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯ ಶುಕ್ರವಾರ ಇಲ್ಲಿ ಪ್ರಕಟಿಸಿದೆ.

‘ಬ್ರಿಕ್ಸ್‌’ನ ಈ ವರ್ಷದ ಅಧ್ಯಕ್ಷ ಚೀನಾ. ಚೀನಾ ಅಧ್ಯಕ್ಷಷಿ ಜಿನ್‌ಪಿಂಗ್ ಶೃಂಗಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್ ಹೇಳಿದ್ದಾರೆ.

ಜಾಗತಿಕ ಅಭಿವೃದ್ಧಿ ಮತ್ತು ಉತ್ತಮ, ಗುಣಮಟ್ಟದ ಬ್ರಿಕ್ಸ್ ಪಾಲುದಾರಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಈ ಶೃಂಗಸಭೆಯಲ್ಲಿ ಚರ್ಚೆಯಾಗಲಿದೆ.

ADVERTISEMENT

ವರ್ಚುವಲ್‌ ಸಭೆಯಲ್ಲಿಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊಮತ್ತು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ ಶೃಂಗಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.