ADVERTISEMENT

ಚಂದ್ರನ ಅಂಗಳದಿಂದ ಕಲ್ಲಿನ ಮಾದರಿ ತರುತ್ತಿರುವ ಚೀನಾ

ಏಜೆನ್ಸೀಸ್
Published 4 ಜೂನ್ 2024, 15:52 IST
Last Updated 4 ಜೂನ್ 2024, 15:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀಜಿಂಗ್ : ಚಂದ್ರನ ಅಂಗಳದಲ್ಲಿನ ಕಲ್ಲು ಮತ್ತು ಮಣ್ಣಿನ ಮಾದರಿಯನ್ನು ಸಂಗ್ರಹಿಸಿ ತರಲಿರುವ ತನ್ನ ಬಾಹ್ಯಾಕಾಶ ನೌಕೆಯು ಭೂಮಿಯತ್ತ ಪ್ರಯಾಣ ಆರಂಭಿಸಿದೆ ಎಂದು ಚೀನಾ ಹೇಳಿದೆ.

ಕಳೆದ ತಿಂಗಳು ಉಡಾವಣೆ ಮಾಡಲಾಗಿದ್ದ ಚೇಂಜ್’ಇ–6 ಹೆಸರಿನ ಬಾಹ್ಯಾಕಾಶ ನೌಕೆಯು ಇತ್ತೀಚೆಗೆ ಚಂದ್ರನ ಮೇಲ್ಮೈನಲ್ಲಿ ಇಳಿದಿತ್ತು. ಈಗಾಗಲೇ ಚಂದ್ರನ ಮೇಲ್ಮೈನಲ್ಲಿ ಸಂಗ್ರಹಿಸಿರುವ ಮಣ್ಣು ಮತ್ತು ಕಲ್ಲಿನ ಮಾದರಿಯನ್ನು ನೌಕೆಯಲ್ಲಿನ ಪೆಟ್ಟಿಗೆಯಲ್ಲಿಟ್ಟುಕೊಂಡಿದ್ದು, ಜೂನ್ 25ರಂದು ಚೀನಾದ ಇನ್ನರ್ ಮಂಗೋಲಿಯಾ ಪ್ರಾಂತ್ಯದ ಮರುಭೂಮಿಯಲ್ಲಿ ಬಂದಿಳಿಯಲಿದೆ ಎಂದು ಚೀನಾ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT